ಚುನಾಯಿತ ಪ್ರತಿನಿಧಿಗಳು, ಕಾರ್ಯನಿರ್ವಾಹಣಾಧಿಕಾರಿಗಳು, ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳಿಗೆ ರಾಜೀವ್ ಗಾಂಧಿ ಚೈತನ್ಯ ಯೋಜನೆ ಬಗ್ಗೆ ಒಂದು ದಿನದ ಪರಿಚಯಾತ್ಮಕ ಕಾರ್ಯಾಗಾರವನ್ನು ಏರ್ಪಡಿಸಲಾಗುವುದು. ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಮಿತಿಯನ್ನು ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ಕೆಳಕಂಡ ಸದಸ್ಯರನ್ನೊಳಗೊಂಡಂತೆ ರಚಿಸುವುದು. 1 ತಾಲ್ಲೂಕು ಪಂಚಾಯತಿ ಅಧ್ಯಕ್ಷರು ಅಧ್ಯಕ್ಷರು 2 ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷರು ಸದಸ್ಯರು 3 ಲೀಡ್ ಬ್ಯಾಂಕ್ ಮ್ಯಾನೇಜರ್ ಸದಸ್ಯರು 4 ಅಭಿವೃದ್ಧಿ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಸದಸ್ಯರು 5 ತಾಲ್ಲೂಕು ಪಂಚಾಯತಿ, ಕಾರ್ಯನಿರ್ವಾಹಣಾಧಿಕಾರಿಗಳು, ಸದಸ್ಯ ಕಾರ್ಯದರ್ಶಿಗಳು ಗ್ರಾಮ ಸಭೆಯಲ್ಲಿ ಅಂತಿಮಗೊಳಿಸಲಾದ ಅರ್ಹ ಯುವಜನರ ಪಟ್ಟಿ ಹಾಗೂ ಗುರುತಿಸಲ್ಪಟ್ಟ ಸ್ವಯಂ ಉದ್ಯೋಗ ಮತ್ತು ವೃತಿಪರ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳ ವಿವರವನ್ನು ತಾಲ್ಲೂಕು ಪಂಚಾಯತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಮಿತಿಗೆ ಕಳುಹಿಸುವುದು. ಸಮಿತಿಯ ಕರ್ತವ್ಯ ಮತ್ತು ಜವಾಬ್ದಾರಿ: ಸಮಿತಿಯು ತಿಂಗಳಿಗೊಮ್ಮೆ ಸಭೆ ಸೇರುವುದು. ಆಯಾಯ ಪ್ರದೇಶಗಳ ಸಾಮಾಜಿಕ ಮತ್ತು ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗಿ ಕೈಗೊಳ್ಳಬಹುದಾದ ಸ್ವ-ಉದ್ಯೋಗ ಚಟುವಟಿಕೆಗಳು ಮತ್ತು ಉತ್ಪನ್ನಗಳ ಮಾರುಕಟ್ಟೆಗೆ ಲಭ್ಯವಿರುವ ವ್ಯವಸ್ಥೆಯ ಕುರಿತು ಪರಾಮರ್ಶೆ ನಡೆಸುವುದು. ವಿವಿಧ ಇಲಾಖೆಗಳಿಂದ ಸಿಗಬಹುದಾದ ತಾಂತ್ರಿಕ ಬೆಂಬಲದ ಲಭ್ಯತೆಯ ಬಗ್ಗೆ ಪರಾಮರ್ಶೆ ಮಾಡುವುದು. ತಾಲ್ಲೂಕು ಮಟ್ಟದ ಬ್ಯಾಂಕರುಗಳ ಸಮಿತಿ • ಈಗಾಗಲೇ ಅಸ್ಥಿತ್ವದಲ್ಲಿರುವ ತಾಲ್ಲೂಕು ಮಟ್ಟದ ಬ್ಯಾಂಕರ್ಸ್ ಸಮಿತಿಯಲ್ಲಿ (ಬಿಎಲ್ಬಿಸಿ) ಬ್ಯಾಂಕ್ನ ಲಿಂಕೇಜ್ಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸುವುದು. ಗ್ರಾಮ ಸಭಾ ಆಯೋಜನೆಯ ಮೂಲಕ ಅರ್ಹ ಯುವಜನರ ಪಟ್ಟಿಯನ್ನು ಅಂತಿಮಗೊಳಿಸುವುದು: • ಯೋಜನಾ ಸೌಲಭ್ಯ ಪಡೆಯಲು ಗುರುತಿಸಲಾದ ಸಂಭವನೀಯ ಯುವಜನರ ಪಟ್ಟಿಯನ್ನು ರಾಜೀವ್ ಗಾಂಧಿ ಚೈತನ್ಯ ಯೋಜನೆಯ ಮಾರ್ಗಸೂಚಿಯನ್ವಯ ಗ್ರಾಮ ಸಭೆಯಲ್ಲಿ ಅಂತಿಮಗೊಳಿಸುವುದು. • ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳ ಸಹಯೋಗದೊಂದಿಗೆ ನಿರುದ್ಯೋಗಿ ಯುವಜನರನ್ನು ಗುರುತಿಸುವ ಸಲುವಾಗಿ ವಿಶೇಷ ಗ್ರಾಮ ಸಭೆಯನ್ನು ಅಯೋಜಿಸಲು ಕ್ರಮವಹಿಸುವುದು. ಮೂಲ: ಅರ್.ಜಿ.ಸಿ.ವೈ